Channapatna | ಸಿಪಿವೈ ಕಾರಿಗೆ ಕಲ್ಲು ಹೊಡೆದ ಜೆಡಿಎಸ್ ಕಾರ್ಯಕರ್ತರು
ರಾಮನಗರ : ಅಭಿವೃದ್ಧಿ ಕಾಮಗಾರಿಗಳ ಭೂಮಿ ವಿಚಾರವಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು. ಸಿ.ಪಿ.ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಮೊಟ್ಟೆ ಹಾಗೂ ಕಲ್ಲು ಎಸೆದಿದ್ದಾರೆ.
ಇದನ್ನ ನಿಯಂತ್ರಿಸಲು ಪೊಲೀಸರು ಜೆಡಿಎಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.

ರಾಂಪುರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ವೇಳೆ ಈ ಘಟನೆ ನಡೆದಿದೆ. ಸ್ಥಳೀಯ ಶಾಸಕರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ರು.
ಅಲ್ಲದೆ ಸಿಪಿವೈ ಹಾಗೂ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು 20 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡದ್ದಾರೆ.