ಸಿ.ಪಿ.ಯೋಗೇಶ್ವರ್ ಕಾರಿಗೆ ಕಲ್ಲು, ಮೊಟ್ಟೆ ಎಸೆತ – ಜೆಡಿಎಸ್ ಕಾರ್ಯಕರ್ತರು ವಶಕ್ಕೆ…
ಸಿ.ಪಿ.ಯೋಗೇಶ್ವರ್ ಹಾಗೂ ಹೆಚ್.ಡಿ. ಕುಮಾರಸ್ವಾಮಿ ನಡುವೆ ಚನ್ಪಟ್ಟಣ ಅಭಿವೃದ್ದಿ ವಿಷಯವಾಗಿ ಜಟಾಪಟಿ ನಡೆಯುತ್ತಿದೆ.
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿಗೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಮತ್ತು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಭೈರಾಪಟ್ಟಣದಲ್ಲಿ ನಡೆದಿದೆ.
ಚನ್ನಪಟ್ಟಣ ತಾಲೂಕಿನ ಭೈರಾಪಟ್ಟಣ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಪೊಲೀಸರು ಜೆಡಿ ಎಸ್ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ಮಾಡಿದ್ದಾರೆ.
ಜೆಡಿಎಸ್ ಕಾರ್ಯಕರ್ತರು ಯೋಗೇಶ್ವರ್ ಕಾರಿನ ಮೇಲೆ ಕಲ್ಲು ತೂರಿ, ಮೊಟ್ಟೆ ಎಸೆದು ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದಕ್ಕೆ ಸಂಬಂಧಿಸಿ ಪ್ರತಿಭಟನಾಕಾರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿ ಜೆಡಿಎಸ್‌ಗೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಪೋಲಿಸ್ ಭದ್ರತೆಯಲ್ಲಿ ಯೋಗೇಶ್ವರ್ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಸ್ಥಳೀಯ ಶಾಸಕ ಕುಮಾರಸ್ವಾಮಿರನ್ನು ಕಡೆಗಣಿಸಿದ್ದಾರೆಂದು ಕಿಡಿಕಾರಿ ಸಿಪಿ.ಯೋಗೇಶ್ವರ್ ನಡೆಗೆ ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Channapatna: Stones, eggs thrown at CP Yogeshwar’s car – JDS workers arrested…