ಹುಬ್ಬಳ್ಳಿಯಲ್ಲಿ ಪಾಕ್ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಸಲ್ಲಿಸಲು ವಿಳಂಬ ಮಾಡಿದ ಇನ್ಸ್ಪೆಕ್ಟರ್ ಜಾಕ್ಸನ್ ಡಿಸೋಜಾರನ್ನು ಅಮಾನತು ಮಾಡಲಾಗಿದೆ. ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲು ವಿಳಂಬ ಮಾಡಿದ ಕಾರಣ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಸಿಕ್ಕಿತ್ತು.
ಹುಬ್ಬಳ್ಳಿಯ ಕೆಎಲ್ಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಕಾಶ್ಮೀರ ಮೂಲದ ವಿದ್ಯಾರ್ಥಿಗಳಾದ ತಾಲಿಬ್, ಅಮಿರ್, ಬಾಸಿತ್ರನ್ನು ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದರು. ತನಿಖಾಧಿಕಾರಿಯಾಗಿದ್ದ ಇನ್ಸ್ಪೆಕ್ಟರ್ ಜಾಕ್ಸನ್ ಡಿಸೋಜಾ, ನಿಯಮದಂತೆ ತನಿಖೆ ಪೂರ್ಣಗೊಳಿಸಿ 90 ದಿನದೊಳಗೆ ಚಾರ್ಜ್ಶೀಟ್ ಸಲ್ಲಿಸಲು ವಿಫಲರಾಗಿದ್ದರು. ಇದು ಕಾಶ್ಮೀರಿ ವಿದ್ಯಾರ್ಥಿಗಳು ಜಾಮೀನು ಪಡೆಯಲು ಅನುಕೂಲವಾಗಿದೆ. ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ಕಾಶ್ಮೀರಿ ವಿದ್ಯಾರ್ಥಿಗಳು ಜಾಮೀನು ಪಡೆದು ಹೊರಬಂದಿದ್ದಾರೆ.
ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ ವ್ಯಕ್ತವಾಗುತ್ತಿದ್ದಂತೆ ಐಜಿಪಿ ರಾಘವೇಂದ್ರ ಸುಹಾಸ್, ಕರ್ತವ್ಯಲೋಪದ ಆರೋಪದ ಮೇಲೆ ಜಾಕ್ಸನ್ ಅವರನ್ನು ಅಮಾನತು ಮಾಡಿ ತನಿಖೆಗೆ ಆದೇಶ ನೀಡಿದ್ದಾರೆ.








