ರಾಯಚೂರು: ಶಾರ್ಟ್ ಸರ್ಕ್ಯೂಟ್ ನಿಂದಾಗ ಎಲೆಕ್ಟ್ರಿಕ್ ಚಾರ್ಜಿಂಗ್ ಬ್ಯಾಟರಿ (Electric Charging Battery) ಅಂಗಡಿಗೆ ಬೆಂಕಿ ಬಿದ್ದು, ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ಮಹಾವೀರ ಚೌಕ್ ನಲ್ಲಿ ಈ ಘಟನೆ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿವೆ. ರಾಯಚೂರಿನ (Raichur) ಆರ್.ಕೆ ಭಂಡಾರಿ ಎಂಬುವವರಿಗೆ ಸೇರಿದ ಅಂಗಡಿಗೆ ಬೆಂಕಿ ತಗುಲಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಆದರೆ, ಅಂಗಡಿಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.