ತುಮಕೂರು: ಆಕಸ್ಮಿಕವಾಗಿ ದೇವಸ್ಥಾನದ ತೇರಿಗೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅದು ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿನ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದಲ್ಲಿಯೇ ಈ ಘಟನೆ ನಡೆದಿದೆ. ಕಲ್ಲೇಶ್ವರ ದೇವಸ್ಥಾನದ ಮುಭಾಗದಲ್ಲಿ ಶೇಡ್ ಮಾಡಿ ರಥ ನಿಲ್ಲಿಸಲಾಗಿತ್ತು. ಆದರೆ, ಮಧ್ಯಾಹ್ನದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲೆಗೆ ಸಂಪೂರ್ಣ ಆಹುತಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ದಾಖಲಾಗಿದೆ.