ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ವಾಹನ ಸಂಚಾರ ಬಂದ್..!

1 min read
charmadi

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ರಸ್ತೆ ವಾಹನ ಸಂಚಾರ ಬಂದ್..!

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ರಸ್ತೆ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ದಿನದ 24 ಗಂಟೆ ಲಘು ಹಾಗೂ ಕೆಲವು ವಾಹನಗಳ ಸಂಚಾರಕ್ಕೆ ಬುಧವಾರ ಅನುಮತಿ ನೀಡಲಾಗಿತ್ತು. ಆದ್ರೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ಆದೇಶವನ್ನು ಪುನಃ ವಾಪಸ್ ಪಡೆದಿದೆ. ಮತ್ತೆ ಸಂಚಾರ ಬಂದ್ ಆಗಿದೆ.

ಸೌದಿ ಅರೇಬಿಯಾ ಬದಲಿಗೆ ಅಮೆರಿಕಾದಿಂದ ಹೆಚ್ಚು ತೈಲ ಆಮದಿಗೆ ಭಾರತ ನಿರ್ಧಾರ..!

ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಮಾರ್ಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಈ ಸಂದರ್ಭದಲ್ಲಿ ವಾಹನಗಳು ಸಂಚರಿಸಿದರೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಡ್ಡಿಯಾಗಲಿದೆ. ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವುದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.

ವಿಶ್ವದಲ್ಲೇ ಅತ್ಯಂತ ಹೆಚ್ಚು ಅಪಾಯಕಾರಿ ರಸ್ತೆಗಳ ಪಟ್ಟಿ: ಟಾಪ್ 5 ನಲ್ಲಿ ಭಾರತ..!

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd