ಕಾಪು | ಜನರಿಗೆ ಭಯ ಹುಟ್ಟಿಸಿದ್ದ ಚಿರತೆ ಬೋನಿಗೆ
ಉಡುಪಿ : ಕಾಪು ತಾಲೂಕಿನ ಜನರಲ್ಲಿ ಹಲವಾರು ದಿನಗಳಿಂದ ಭಯ ಹುಟ್ಟಿಸಿದ್ದ ಚಿರತೆ ಬೋನಿಗೆ ಬಿದ್ದಿದೆ.
ಕಾಪು ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಕುರಾಲು ಬಳಿ ಚಿರತೆ ಜನರಿಗೆ ಕಾಟ ನೀಡುತ್ತಿತ್ತು.
ಕುರಾಲ್ ರೆನ್ನಿ ಕುಂದರ್ ಎಂಬವರ ಮನೆ ಬಳಿ ಚಿರತೆಯ ಓಡಾಟದ ಬಗ್ಗೆ ಮಾಹಿತಿ ಪಡೆದು ಅರಣ್ಯ ಇಲಾಖೆ ಬೋನನ್ನು ಇರಿಸಿತ್ತು.
ಕಳೆದ ರಾತ್ರಿ ನಾಲ್ಕು ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ಆ ಮೂಲಕ ಜನರು ನಿಟ್ಟುಸಿರುವ ಬಿಡುವಂತಾಗಿದೆ.
ಕಾರ್ಯಾಚರಣೆಯಲ್ಲಿ ಆರ್.ಎಫ್.ಒ ಜೀವನ್ ದಾಸ್ ಶೆಟ್ಟಿ, ಆರ್.ಎಫ್.ಒ ಗುರುಪ್ರಸಾದ್, ಫಾರೆಸ್ಟ್ ಗಾರ್ಡ್ ಎಚ್ ಜಯರಾಮ್ ಶೆಟ್ಟಿ ಮತ್ತಿತರು ಭಾಗಿಯಾಗಿದ್ದರು.