ದಕ್ಷಿಣ ಆಫ್ರಿಕಾದಿಂದ ಮಧ್ಯಪ್ರದೇಶಕ್ಕೆ ಆಗಮಿಸಿದ 12 ಚೀತಾಗಳು…
ನಮಿಬಿಯಾದಿಂದ ಎಂಟು ಚೀತಾಗಳನ್ನ ಭಾರತಕ್ಕೆ ತಂದ ಕೆಲವು ತಿಂಗಳುಗಳ ಬಳಿಕ ದಕ್ಷಿಣ ಆಫ್ರಿಕಾದಿಂದ ಇದೀಗ ಹನ್ನೆರಡು ಚೀತಾಗಳು ಮಧ್ಯ ಪ್ರದೇಶಕ್ಕೆ ಆಗಮಿಸಿವೆ.
ಚೀತಾಗಳನ್ನ ಹೊತ್ತು ತಂದ ವಾಯುಪಡೆಯ C 17 ವಿಮಾನ ಮಧ್ಯಪ್ರದೇಶದ ಗ್ವಾಲಿಯರ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈಗ ಅವುಗಳನ್ನ ಹೆಲಿಕಾಫ್ಟರ್ ಮೂಲಕ ಕುನೋ ಅಂತರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗುತ್ತದೆ.
ಒಟ್ಟು ಏಳು ಗಂಡು ಮತ್ತು ಐದು ಹೆಣ್ಣು ಚಿರತೆಗಳನ್ನ ದಕ್ಷಿಣ ಆಫ್ರಿಕಾದಿಂದ ಕರೆತರಲಾಗಿದೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ತಮ್ಮ ಕ್ವಾರಂಟೈನ್ ಆವರಣಗಳಿಗೆ ಬಿಡುಗಡೆ ಮಾಡಲಿದ್ದಾರೆ.
ಕುನೋ ಅಂತರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳಿಗಾಗಿ ಮೀಸಲು ಪ್ರದೇಶದಲ್ಲಿ 10 ಕ್ವಾರಂಟೈನ್ ಆವರಣಗಳನ್ನು ರಚಿಸಲಾಗಿದೆ. ಭಾರತೀಯ ವನ್ಯಜೀವಿ ಕಾನೂನಿನ ಪ್ರಕಾರ, ದೇಶಕ್ಕೆ ಬಂದ ನಂತರ ಪ್ರಾಣಿಗಳನ್ನು 30 ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕಾಗುತ್ತದೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ಎಂಟು ಚೀತಾಗಳನ್ನು ಭಾರತಕ್ಕೆ ತರಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನದಂದು – ಸೆಪ್ಟೆಂಬರ್ 17 ರಂದು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಚೀತಾಗಳನ್ನ ಬಿಡುಗಡೆ ಮಾಡಿದ್ದರು.
Cheetahs: 12 Cheetahs arrived in Madhya Pradesh from South Africa…