ತಮಿಳುನಾಡಿನಲ್ಲಿ ಹಿಂಗಾರು ಅಬ್ಬರ – ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ…
ತಮಿಳುನಾಡಿನಲ್ಲಿ ಹಿಂಗಾರು ಮಳೆ ಅಬ್ಬರಿಸುತ್ತಿದ್ದು, ಚೆನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಶುಕ್ರವಾರ ಹಲವು ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದೆ.
ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ತಮಿಳುನಾಡಿನ ತಿರುವಳ್ಳೂರು, ರಾಣಿಪೇಟ್ ಮತ್ತು ಕಾಂಚೀಪುರಂ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಚೆನ್ನೈ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.
ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ ಶನಿವಾರ ಬೆಳಗಿನ ತನಕ ವಾಯುವ್ಯವಾಗಿ ತಮಿಳುನಾಡು ಮತ್ತು ಪುದುಚೇರಿ ಕರಾವಳಿಯ ಕಡೆಗೆ ಮಾರುತಗಳು ಚಲಿಸುವ ಸಾಧ್ಯತೆಯಿದೆ. ಶನಿವಾರ ಮತ್ತು ಭಾನುವಾರ ತಮಿಳುನಾಡು ಮತ್ತು ಕೇರಳದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ 5,093 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 1,149 ಸಿಬ್ಬಂದಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (SDRF) 899 ಸಿಬ್ಬಂದಿಯನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸಿದೆ.
ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಚೆನ್ನೈ, ಚೆಂಗಲ್‌ಪೇಟ್, ತಿರುವಳ್ಳೂರು, ರಾಣಿಪೇಟ್, ಕಾಂಚೀಪುರಂ ಮತ್ತು ವೆಲ್ಲೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶುಕ್ರವಾರ ಮತ್ತು ಶನಿವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
Chennai rain : Red alert sounded in 4 Tamil Nadu districts, very heavy rainfall likely in Chennai








