ಐಪಿಎಲ್ ಸೀಸನ್ 13 ನ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 13 ರ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ವಿಕೆಟ್ ಗಳ ಜಯ ಸಾಧಿಸಿದೆ.
ಐಪಿಎಲ್ ಉದ್ಘಾಟನಾ ಪಂದ್ಯಾವಳಿಯ ಮೊದಲ ಪಂದ್ಯವು ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಶನಿವಾರ ನಡೆಯಿತು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್.ಧೋನಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು. ಇತ್ತ ಬ್ಯಾಟಿಂಗ್ ಪ್ರಾರಂಭಿಸಿದ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಸಾಧಾರಣ ಮೊತ್ತದ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ಐದು ವಿಕೆಟ್ ನಷ್ಟಕ್ಕೆ ಭರ್ಜರಿ ಜಯ ಸಾಧಿಸಿದೆ