Chetan ahimsa | ನಟ ಚೇತನ್ ಜಾಮೀನಿನ ಮೇಲೆ ಬಿಡುಗಡೆ
ನಟ ಚೇತನ್ ಜಾಮೀನಿನ ಮೇಲೆ ಬಿಡುಗಡೆ
ನ್ಯಾಯಾಂಗ ನಿಂದನೆ ಆರೋಪದಡಿ ಜೈಲು ಸೇರಿದ್ದ ನಟ
ಸೋಮವಾರ ಸಂಜೆ ಪರಪ್ಪನ ಅಗ್ರಹಾರದಿಂದ ಬಿಡುಗಡೆ
ನಟ ಚೇತನ್ ಗೆ ಅದ್ಧೂರಿ ಸ್ವಾಗತ ಕೋರಿದ ಅಭಿಮಾನಿಗಳು
ಬೆಂಗಳೂರು : ನ್ಯಾಯಾಂಗ ನಿಂದನೆ ಆರೋಪದಡಿ ಜೈಲು ಪಾಲಾಗಿದ್ದ ನಟ ಚೇತನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಫೆಬ್ರವರಿ 22 ರಂದು ನ್ಯಾಯಾಂಗ ನಿಂದನೆ ಆರೋಪದ ಮೇರೆಗೆ ಚೇತನ್ ಅವರನ್ನ ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದರು.
ಬಳಿಕ ಅವರನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಫೆಬ್ರವರಿ 25 ರಂದು ಚೇತನ್ ಗೆ 8ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.
ಆದರೆ, ಜಾಮೀನಿನ ಷರತ್ತುಗಳನ್ನು ಪೂರೈಸಲು ಶುಕ್ರವಾರ ಸಾಧ್ಯವಾಗಿರಲಿಲ್ಲ. ಹೀಗಾಗಿ, ಸೋಮವಾರ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ನಂತರವೇ ಚೇತನ್ ಜೈಲಿನಿಂದ ಬಿಡುಗಡೆಗೊಂಡರು.
ಜೈಲಿನಿಂದ ಚೇತನ್ ಬಿಡುಗಡೆಯಾಗುತ್ತಿದ್ದಂತೆ ಅವರನ್ನ ಅಭಿಮಾನಿಗಳು ಸ್ವಾಗತಿಸಿದರು.
ಈ ವೇಳೆ ಮಾತನಾಡಿದ ಚೇತನ್, ಪ್ರಶ್ನಿಸೋದು ನಮ್ಮ ಹಕ್ಕು ಮತ್ತು ಕರ್ತವ್ಯ ಎಂದು ಹೇಳಿದರು. Chetan-ahimsa-released-from-jail