ಸಿದ್ದರಾಮಯ್ಯರಂತಹ ಜಾತಿವಾದಿ ನಾಯಕ ರಾಜ್ಯಕ್ಕೆ ಅಗತ್ಯವಿಲ್ಲ : ಚೇತನ್ chethan ahimsa saaksha tv
ಬೆಂಗಳೂರು : ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ ಎಂದು ಟ್ವೀಟ್ ಮಾಡುವ ಮೂಲಕ ನಟ ಚೇತನ್ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಚೇತನ್, ‘ಕರ್ನಾಟಕದ ಪ್ರಬಲ ಮತ್ತು ವಾದನೀಯವಾಗಿ ಕಾಂಗ್ರೆಸ್ಸಿನ ಅತ್ಯುತ್ತಮ ನಾಯಕರಾದ ಸಿದ್ದರಾಮಯ್ಯನವರು, ಮೂಲಭೂತವಾಗಿ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು. ದೇಶಕ್ಕೆ ಮತ್ತು ರಾಜ್ಯಕ್ಕೆ ಇಂತಹ ನಾಯಕರ ಅಗತ್ಯ ಇಲ್ಲ’ ಎಂದು ಬರೆದುಕೊಂಡಿದ್ದಾರೆ.
ಇನ್ನು ನಟ ಚೇತನ್ ಈ ಟ್ವೀಟ್ ಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.