Chethan Sharma : BCCI ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ವಜಾ..!!
T20 ವಿಶ್ವಕಪ್ ನಲ್ಲಿ ಭಾರತ ಸೆಮಿಫೈನಲ್ ನಲ್ಲಿ ಇಂಗ್ಲಾಂಡ್ ವಿರುದ್ಧ ಸೋತು ಪಂದ್ಯಾವಳಿಯಿಂದ ಹೊರಬಿದ್ದಿತ್ತು.. ಈ ಮೂಲಕ ಫೈನಲ್ಸ್ ಪ್ರವೇಶಿಸಿ ಭಾರತ ವಿಶ್ವಕಪ್ ಗೆಲ್ಲುವ ಭಾರತ ಕ್ರಿಕೆಟ್ ಅಭಿಮಾನಿಗಳ ಕನಸು ಕಮರಿ ನಿರಾಸೆ ಅನುಭವಿಸಿದ್ದರು..
ಇದರ ಬೆನ್ನಲ್ಲೇ ಇದೀಗ ಬಿಸಿಸಿಐ ಹಿರಿಯ ರಾಷ್ಟ್ರೀಯ ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ ಅವರನ್ನು ವಜಾ ಗೊಳಿಸಲಾಗಿದೆ. ಅಲ್ಲದೇ, ಚೇತನ್ ಶರ್ಮಾರನ್ನು ವಜಾಗೊಳಿಸಿದ ನಂತರ ಬಿಸಿಸಿಐ ಟ್ವಿಟರ್‌ನಲ್ಲಿ ರಾಷ್ಟ್ರೀಯ ಆಯ್ಕೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಭಾರತ ಹಿರಿಯ ಪುರುಷರ ತಂಡಕ್ಕೆ ರಾಷ್ಟ್ರೀಯ ಆಯ್ಕೆಗಾರರ ಸ್ಥಾನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಪ್ರಕಟಿಸಿದೆ. ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 28ರ ಸಂಜೆ 6 ಗಂಟೆಗೆ ಕೊನೆಯ ದಿನಾಂಕ ಮತ್ತು ಸಮಯ ಎಂದು ತಿಳಿಸಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಲವು ಮಾನದಂಡಗಳನ್ನು ಪೂರೈಸಬೇಕು ಎಂದು ತಿಳಿಸಲಾಗಿದೆ..
ಅಭ್ಯರ್ಥಿಗಳು ಕನಿಷ್ಠ ಏಳು ಟೆಸ್ಟ್ ಪಂದ್ಯಗಳು, 30 ಪ್ರಥಮ ದರ್ಜೆ ಪಂದ್ಯಗಳು ಅಥವಾ 10 ODI ಮತ್ತು 20 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರಬೇಕು. ಅಭ್ಯರ್ಥಿಗಳು ಕನಿಷ್ಠ ಐದು ವರ್ಷಗಳ ಹಿಂದೆ ಆಟದಿಂದ ನಿವೃತ್ತರಾಗಿರಬೇಕು ಎಂದು ಉಲ್ಲೇಖಿಸಲಾಗಿದೆ..








