National News – ಛತ್ತೀಸ್ಗಢ ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಮಾತ್ರ ಕೆಲಸ
ಗಣರಾಜ್ಯೋತ್ಸವ ಅಂಗವಾಗಿ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ಕೊಟ್ಟಿದ್ದಾರೆ, ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸರ್ಕಾರಿ ಕಚೇರಿಗಳು ಇನ್ಮುಂದೆ ವಾರದಲ್ಲಿ 5 ದಿನ ಮಾತ್ರ ಕಾರ್ಯನಿರ್ವಹಿಸಲಿವೆ ಎನ್ನುವ ಮೂಲಕ ಸರ್ಕಾರಿ ನೌಕರರಿಗೆ ಬಂಪರ್ ಉಡುಗೊರೆ ನೀಡಿದ್ದಾರೆ.
ಸರ್ಕಾರಿ ನೌಕರರ ದಕ್ಷತೆ ಮತ್ತು ಕಾರ್ಯಕ್ಷಮತೆಯನ್ನ ಹೆಚ್ಚಿಸುವ ಸಲುವಾಗಿ ಛತ್ತೀಸ್ಗಢ ಸರ್ಕಾರವು ವಾರದಲ್ಲಿ ಐದು ದಿನ ಕೆಲಸ ನಿಯಮವನ್ನು ಜಾರಿಗೊಳಿಸುತ್ತಿದೆ. ಎಂದು ಮುಖ್ಯಮಂತ್ರಿ ಹೇಳಿದ್ದಾರೆ. Chhattisgarh government employees only work 5 days a week
ಛತ್ತೀಸ್ಗಢವು ದಟ್ಟವಾದ ಅರಣ್ಯ ಪ್ರದೇಶ ಒಳಗೊಂಡಿರುವ ರಾಜ್ಯವಾಗಿದೆ. ಬಹುಪಾಲು ಬುಡಕಟ್ಟು ಜನರ ಜನಸಂಖ್ಯೆಯ ಜೀವನ ಅರಣ್ಯಗಳ ಮೇಲೆ ಅವಲಂಬಿತವಾಗಿದೆ. ಈ ಅರಣ್ಯವಾಸಿಗಳಿಗೆ ಕೆಲವು ಯೋಜನೆಗಳನ್ನು ಮುಂದಿನ ದಿನಗಳಲ್ಲಿ ತರುತ್ತೇವೆ ಎಂದು ಹೇಳಿದ್ದಾರೆ.