ಚಾಮರಾಜನಗರ: ಎರಡು ದಿನಗಳ ಚಾಮರಾಜನಗರ ಜಿಲ್ಲಾ ಪ್ರವಾಸದಲ್ಲಿದ್ದ ನಾಡಿನ ದೊರೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತುಂತುರು ಮಳೆಯ ನಡುವೆಯೂ ಮಲೆ ಮಹದೇಶ್ವರ ಸ್ವಾಮೀಯ ದರ್ಶನ ಪಡೆದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟಕ್ಕೆ ಬುಧವಾರವೇ ತೆರಳಿ ವಾಸ್ತವ್ಯ ಹೂಡಿದ್ದ ಯಡಿಯೂರಪ್ಪ,
ಗುರುವಾರ ಬೆಳಗ್ಗೆ ಮಲೆ ಮಹದೇಶ್ವರ ಸ್ವಾಮೀಗೆ ವಿಶೇಷ ಪೂಜೆ ಸಲ್ಲಿಸಿದರು.

ಮಹದೇಶ್ವರ ಬೆಟ್ಟದಲ್ಲಿ ಹಮ್ಮಿಕೊಂಡಿರುವ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಯಡಿಯೂರಪ್ಪ, ಶ್ರೀಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದ ಸಭಾಂಗಣದಲ್ಲಿಂದು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿಗಳು ಪ್ರಾಧಿಕಾರದ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರದ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಾಧಿಕಾರದ ವತಿಯಿಂದ 15 ಶಾಲೆಗಳನ್ನು ಗುರುತಿಸಲಾಗಿದೆ. ಈ ಶಾಲೆಗಳನ್ನು ದತ್ತು ತೆಗೆದುಕೊಂಡು ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಿ ಶಾಲೆಗಳ ಸವಾರ್ಂಗೀಣ ಪ್ರಗತಿಗೆ ಒತ್ತು ನೀಡಲಾಗುವುದು ಎಂದರು.
ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಭಕ್ತಾಧಿಗಳಿಗೆ ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಮಾಡಿಕೊಡಲಾಗುವುದು. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








