Chief Minister Basavaraja Bommai | ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ
ಹುಬ್ಬಳ್ಳಿ : ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ.
ಇದರಿಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಕೆಲವು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಜನರು ಬದುಕು ಬರ್ಬಾದ್ ಆಗಿದೆ.
ಪ್ರಸ್ತುತ ಭಾರಿ ಮಳೆ ಹುಬ್ಬಳ್ಳಿಯ ವಿಮಾನ ನಿಲ್ಡಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಈಗಾಗಲೇ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿ ಗಳ ಜೊತೆ ಸಭೆ ನಡೆಸಿದ್ದೇನೆ.
ಮಹಾರಾಷ್ಟ್ರ ಹಾಗೂ ನಮ್ಮ ರಾಜ್ಯದ ಡಿಸಿಗಳು ಸಂಪರ್ಕದಲ್ಲಿರುವಂತೆ ಸೂಚನೆ ನೀಡಲಾಗಿದೆ.

ನದಿಗಳ ಪ್ರವಾಹಕ್ಕೆ ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆದಿದೆ ಎಂದು ತಿಳಿಸಿದರು.
ನೀರಿನ ಪ್ರಮಾಣಕ್ಕೆ ತಕ್ಕಂತೆ ಬಳಕೆಗೆ ಕುರಿತು ಯೋಜನೆ ರೂಪಿಸಲಾಗುತ್ತಿದೆ.
ತಾಂತ್ರಿಕ ದೋಷದಿಂದ ಎರಡೂವರೇ ಲಕ್ಷ ಮನೆ ಮಂಜೂರಾತಿ ವಿಳಂಬವಾಗಿತ್ತು, ಈಗ ಅದನ್ನು ಸರಿಪಡಿಸಲಾಗಿದೆ.
ಕಚ್ಚಾ ಮನೆಗಳನ್ನು ಪಕ್ಕಾ ಮಾಡಲು ಚಿಂತನೆ ನಡೆದಿದೆ.
ರಾಜ್ಯದ ನೆರೆ ನಷ್ಟದ ಬಗ್ಗೆ ವರದಿ ತಯಾರಿಸಿ ಶೀಘ್ರವಾಗಿ ಕೇಂದ್ರಕ್ಕೆ ಸಲ್ಲಿಸಲಾಗುತ್ತೆ.
ಈಗಾಗಲೇ ಎಲ್ಲಾ ಉಸ್ತುವಾರಿಗಳು ಅವರಿಗೆ ಸಂಬಂಧಪಟ್ಟ ಜಿಲ್ಲೆಯಲ್ಲಿ ಪ್ರವಾಹ ಕಾರ್ಯೋನ್ಮುಖ ರಾಗಿದ್ದು ನಿತ್ಯ ಅವರ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.