ಪರಿಹಾರ ಕಾರ್ಯಕ್ಕೆ ಹಣದ ಅಭಾವವಿಲ್ಲದಂತೆ ಕ್ರಮ : ಬೊಮ್ಮಾಯಿ Basavaraja Bommai saaksha tv
ಕೋಲಾರ : ಪ್ರವಾಹದಿಂದ ಕೋಲಾರ ಜಿಲ್ಲೆಯ 55 ಸಾವಿರ ಹೆಕ್ಟೇರ್ ಪ್ರದೇಶದ ರಾಗಿ ಬೆಳೆ, ಕಡಲೆಕಾಯಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಗೊಳಗಾಗಿದ್ದು, ತಾತ್ಕಾಲಿಕ ಮತ್ತು ಶಾಶ್ವತ ಪರಿಹಾರ ಕಾರ್ಯವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪರಿಹಾರ ಕಾರ್ಯಕ್ಕೆ ಹಣದ ಅಭಾವವಿಲ್ಲದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಳೆ ಹಾನಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕೋಲಾರ ಜಿಲ್ಲೆಯ ಪ್ರವಾಹ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಕೋಲಾರ ಜಿಲ್ಲೆಯ ಮುದವಾಡ ಕೆರೆ ತುಂಬಿರಲಿಲ್ಲ. ಕೆ.ಸಿ. ವ್ಯಾಲಿಯಿಂದ ಕೆರೆ ತುಂಬಿಸಲಾಗಿತ್ತು.
ಆದರೆ, ಈಗ ಪ್ರವಾಹದಿಂದ ಕೆರೆ ತುಂಬಿದ್ದು, ಕೆಸಿ. ವ್ಯಾಲಿಯ ಎರಡನೇ ಹಂತದ ಕಾಮಗಾರಿಯನ್ನು ಕೈಬಿಡುವುದಿಲ್ಲ. ಈ ಯೋಜನೆ ಮುಂದುವರಿಸಿಕೊಂಡು ಹೋಗಲಾಗುವುದು ಎಂದು ಭರವಸೆ ನೀಡಿದರು.
ಪ್ರವಾಹದಿಂದ ಕೋಲಾರ ಜಿಲ್ಲೆಯ 55 ಸಾವಿರ ಹೆಕ್ಟೇರ್ ಪ್ರದೇಶದ ರಾಗಿ ಬೆಳೆ, ಕಡಲೆಕಾಯಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಗೊಳಗಾಗಿದ್ದು, ತಾತ್ಕಾಲಿಕ ಮತ್ತು ಶಾಶ್ವತ ಪರಿಹಾರ ಕಾರ್ಯವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪರಿಹಾರ ಕಾರ್ಯಕ್ಕೆ ಹಣದ ಅಭಾವವಿಲ್ಲದಂತೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಇತರೆ ಜಿಲ್ಲೆಗಳಿಗೂ ಭೇಟಿ ನೀಡಿ ಸಮೀಕ್ಷೆ ನಡೆಸಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ತಕ್ಷಣವೇ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.









