ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ಅವರ ಪತ್ನಿ ಶ್ರೀಮತಿ ವಿಜಯಾ ನಾಯಕ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ವಿಜಯಾ ನಾಯಕ್ ಅವರ ನಿಧನ ಅತ್ಯಂತ ದುರದೃಷ್ಟಕರ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಈ ಆಘಾತವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.



ಅಂತೆಯೇ ಅಪಘಾತದಲ್ಲಿ ಗಾಯಗೊಂಡಿರುವ ಸಚಿವ ನಾಯಕ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದ್ದಾರೆ. ಸಚಿವರಿಗೆ ಎಲ್ಲ ಅಗತ್ಯ ನೆರವು ನೀಡುವ ಬಗ್ಗೆ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








