ಸಿಎಂ ಬಿಎಸ್‍ವೈ – ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ…
ಕೊರೋನಾ ಸೊಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕದ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ಹಾಗೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ತಿಳಿಸಿದೆ.
ಬಿಎಸ್‍ವೈ ಮತ್ತು ಸಿದ್ದರಾಮಯ್ಯ ಅವರ ಬಿಪಿ ಶುಗರ್ ಚೆಕಪ್ ಮಾಡಲಾಗಿದೆ. ಬಿಎಸ್‍ವೈ ಅವರಿಗೆ ಕಫ ಕೂಡ ಕಡಿಮೆಯಾಗಿದೆ. ಸಿದ್ದರಾಮಯ್ಯನವರ ಜ್ವರ ಕೂಡ ವಾಸಿಯಾಗಿದೆ ಎಂದು ತಿಳಿದು ಬಂದಿದೆ.
ಈ ನಡುವೆ ಬಿಎಸ್ ಯಡಿಯೂರಪ್ಪನವರು ಆಡಳಿತದ ಕಡೆಗೂ ಗಮನ ಹರಿಸುತ್ತಿದ್ದಾರೆ. ಆಸ್ಪತ್ರೆಯಿಂದಲೇ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸೂಕ್ತ ಸಲಹೆಗಳನ್ನು ನೀಡುತ್ತಿದ್ದಾರೆ. ಇನ್ನೊಂದೆಡೆ ಕೊರೊನಾ ನಡುವೆ ಈಗ ಮಳೆರಾಯನ ಅವಾಂತರದಿಂದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಈ ಬಗ್ಗೆಯೂ ಬಿಎಸ್‍ವೈ ಅವರು ಮಾಹಿತಿ ಪಡೆದುಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ಸತತ ಸಂಪರ್ಕದಲ್ಲಿರುವ ಬಿಎಸ್‍ವೈ ಕಳೆದ ಮೂರು ದಿನಗಳಿಂದ ಆಸ್ಪತ್ರೆಯಿಂದಲೇ ತನ್ನ ಕರ್ತವ್ಯವನ್ನು ಮಾಡುತ್ತಿದ್ದಾರೆ.








