ಯಾದಗಿರಿ: ಬೀದರ್ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಾಟಾಚಾರಕ್ಕೆ ಯಾದಗಿರಿ ಜಿಲ್ಲೆ ಭೇಟಿ ನೀಡಿದ್ರಾ ಎಂಬ ಮಾತುಗಳು ಕೇಳಿ ಬರುತ್ತಿವೆ.
ಬೀದರ್ ಹಾಗೂ ಬಸವಕಲ್ಯಾಣ ಕಾರ್ಯಕ್ರಮ ಮುಗಿಸಿ ಯಾದಗಿರಿಗೆ ವಿಶೇಷ ಹೆಲಿಕಾಪ್ಟರ್‍ನಲ್ಲಿ ಬಂದ ಬಿಎಸ್‍ವೈ, ತರಾತುರಿಯಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮಗಳನ್ನು ಮುಗಿಸಿ ಹೊರಟಿದ್ದಾರೆ.
ಯಾದಗಿರಿ ಜನರ ಕನಸಿನ ಕೂಸು ಸರ್ಕಾರಿ ಮೆಡಿಕಲ್ ಕಾಲೇಜು ಕಾಮಗಾರಿಗೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಿದರು. ಬಸವಕಲ್ಯಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಯಾದಗಿರಿಗೆ ಆಗಮಿಸಿದ ಬಿಎಸ್‍ವೈಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು. ನಂತರ ಮುದ್ನಾಳ್ ಗ್ರಾಮದ ಬಳಿಯ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಆಗಮಿಸಿ ಕಟ್ಟಡದ ಲೋಕಾರ್ಪಣೆಗೊಳಿಸಿದರು. ನಂತರ ಮೆಡಿಕಲ್ ಕಾಲೇಜು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಪ್ರಭು ಚವ್ಹಾಣ್, ಆರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ಮನವಿ ಸ್ವೀಕರಿಸಿ ಹೊರಟ ಸಿಎಂ
ಯಾದಗಿರಿ ಜಿಲ್ಲಾಸ್ಪತ್ರೆ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಿಲನ್ಯಾಸಕ್ಕೆ ನೆರವೇರಿಸಿದ ಸಿಎಂ ಯಡಿಯೂರಪ್ಪ, ವೇದಿಕೆಗೆ ಆಗಮಿಸಿ ಅವಸರದಲ್ಲಿ ಸಂಘಟನೆಗಾರರ ಮನವಿಯನ್ನು ಸ್ವೀಕರಿಸಿ ಹೊರಟರು. ಮುಖ್ಯಮಂತ್ರಿಗಳ ಆಗಮನಕ್ಕಾಗಿ ಕಾದು ಕುಳಿತಿದ್ದ ಜನರು ನಿರಾಸೆಯಿಂದ ವಾಪಸ್ ತೆರಳಬೇಕಾಯಿತು. ತರಾತುರಿಯಲ್ಲಿ ಕಾರ್ಯಕ್ರಮ ಮುಗಿದ ಹಿನ್ನೆಲೆಯಲ್ಲಿ ಸಂಘಕರ ಮನವಿ ಸ್ವೀಕರಿಸಿ ವಿಶೇಷ ಹೆಲಿಕಾಪ್ಟರ್ ಮೂಲಕ ಬೀದರ್ ಗೆ ಪ್ರಯಾಣ ಮಾಡಿದರು. ಬೀದರ್‍ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಬೇಕಿದ್ದ ಕಾರಣ ತರಾತುರಿಯಲ್ಲಿ ಯಾದಗಿರಿ ಪ್ರವಾಸ ಮುಗಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel