ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮೂರು ಠಾಣೆಗಳ ನಾಲ್ವರು ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಮೂರು ಪೊಲೀಸ್ ಠಾಣೆಗಳನ್ನು ಸೀಲ್‍ಡೌನ್ ಮಾಡಲಾಗಿದೆ.
ಚಿಕ್ಕಮಗಳೂರು ನಗರದ ಗ್ರಾಮಾಂತರ ಠಾಣೆ, ಅಜ್ಜಂಪುರ ಹಾಗೂ ಕಡೂರು ತಾಲೂಕಿನ ಯಗಟಿ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಕೊರೊನಾ ಸೋಂಕಿತ ಪೇದೆಗಳನ್ನ ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಜಿಲ್ಲೆಯಲ್ಲಿ ಈವರೆಗೆ 250 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆದರೆ, ಕಳೆದ ಮೂರು ದಿನಗಳಲ್ಲಿ 82 ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಕಾಫಿನಾಡಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ.
ಹೊರ ಜಿಲ್ಲೆಯವರ ಸಂಪರ್ಕವೇ ಇಲ್ಲದ ಸುಮಾರು 30ಕ್ಕೂ ಹೆಚ್ಚು ಜನರಿಗೆ ಶೀತ, ಕೆಮ್ಮು ಹಾಗೂ ಜ್ವರ ಕಾಣಿಸಿಕೊಂಡಿದ್ದು ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








