Chikkaballapur : ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ
ಚಿಕ್ಕಬಳ್ಳಾಪುರ : ತಾಲೂಕಿನ ಸೊಲಿಕುಂಟೆ ಗ್ರಾಮದ ಮನೆಯೊಂದರಲ್ಲಿ ಪತಿ ಹಾಗೂ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಗ್ರಾಮದ ಆಟೋಡ್ರೈವರ್ ಚಂದ್ರು ಮತ್ತು ಶಶಿಕಲಾ ಮೃತ ದಂಪತಿ.
ಮದುವೆಯಾಗಿ 5 ವರ್ಷವಾದರೂ ಮಕ್ಕಳಾಗದಿದ್ದಕ್ಕೆ ಬೇಸರಗೊಂಡಿದ್ದರು.
ಇದರಿಂದ ನೇಣು ಬಿಗಿದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Chikkaballapur