Chikkaballapur : ರೈಲಿಗೆ ಸಿಲುಕಿ ಛಿದ್ರಗೊಂಡ ಮೃತದೇಹಗಳು; ಒಂದೇ ಕಟುಂಬದ ಮೂವರು ಆತ್ಮಹತ್ಯೆ ಶಂಕೆ…
ರೈಲ್ವೆ ಹಳಿ ಮೇಲೆ ಛಿದ್ರ ಛಿದ್ರಗೊಂಡ ರೀತಿಯಲ್ಲಿ ಮೂರು ಮೃತದೇಹಗಳು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಭಾವಿ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.
ಅಂದಾಜು 45 ವರ್ಷದ ಪುರುಷ ವ್ಯಕ್ತಿ ಮತ್ತು ಅಂದಾಜು 25 ವರ್ಷದ ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮೃತ ದೇಹಗಳ ಬಗ್ಗೆ ಇನ್ನೂ ಹೆಚ್ಚಿನ ವಿವರಗಳು ತಿಳಿದು ಬಂದಿಲ್ಲ .
ಮೃತ ವ್ಯಕ್ತಿಯ ಶರ್ಟ್ ಮೇಲೆ ವಿನಾಯಕ ಟೈಲರ್ ಗೌರಿಬಿದನೂರು ಎಂಬ ಗುರುತಿದೆ ಒಂದೇ ಕುಟುಂಬದ ಸದಸ್ಯರಾಗಿರುವ ಅನುಮಾನವನ್ನ ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಠಾಣೆಯ ಪೊಲೀಸರು ಹಾಗೂ ರೈಲ್ವೆ ಇಲಾಖೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Chikkaballapur: Dead bodies mangled by train; Three suspected suicides from the same family