ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ?

1 min read
siddaramaiah

ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ?

ಬೆಂಗಳೂರು : ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಸಿಎಂ ಬಿಎಸ್ ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರದ ಘಟನೆ ಸಂಬಂಧ ಸರಣಿ ಟ್ವೀಟ್ ಗಳನ್ನ ಮಾಡಿರುವ ಸಿದ್ದರಾಮಯ್ಯ, ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸುವೆ.

ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಸಿಎಂ ಬಿಎಸ್ ಯಡಿಯೂರಪ್ಪನವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ?

siddaramaiah

ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರುಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ದುರಾಡಳಿತಕ್ಕೆ ಬಲಿಯಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಕ್ಷಣ ಆದೇಶಿಸಬೇಕು. ಇದಕ್ಕಿಂತ ಮೊದಲು ಈ ಘಟನೆಗೆ ಕಾರಣರಾದ ಜಿಲ್ಲೆಯ ಎಲ್ಲ ಅಧಿಕಾರಿಗಳನ್ನು ಅಮಾನತ್‍ನಲ್ಲಿಟ್ಟು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು

ರಾಜ್ಯದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೂ ಆಂಧ್ರಪ್ರದೇಶದ ಗಣಿಲೂಟಿಕೋರರಿಗೂ ನೇರವಾದ ಸಂಬಂಧ ಇದೆ. ವಿಧಾನಸೌಧದಿಂದ ಜಿಲ್ಲಾಮಟ್ಟದ ವರೆಗೆ ಎಲ್ಲರೂ ಇದರಲ್ಲಿ ಷಾಮೀಲಾಗಿದ್ದಾರೆ. ಚಿಕ್ಕಬಳ್ಳಾಪುರದ ಈ ಅಕ್ರಮ ಗಣಿಗಾರಿಕೆ, ಉಸ್ತುವಾರಿ ಸಚಿವ ಸುಧಾಕರ್ ಅವರ ಗಮನಕ್ಕೆ ಬಂದಿರಲಿಲ್ಲವೇ?

ಕರ್ನಾಟಕದಲ್ಲಿ 2000ಕ್ಕೂ ಹೆಚ್ಚು ಅನಧಿಕೃತ ಕ್ರಷರ್,ಕ್ವಾರಿಗಳಿವೆ ಎಂದು ಹೇಳಲಾಗುತ್ತಿದೆ. ಇವುಗಳ ಪಟ್ಟಿಯನ್ನು ಮುಖ್ಯಮಂತ್ರಿ ಅವರು ತಕ್ಷಣ ಬಿಡುಗಡೆಗೊಳಿಸ ಬೇಕು ಮತ್ತು ಅವುಗಳನ್ನು ನಿರ್ದಾಕ್ಷಿಣ್ಯವಾಗಿ ಮುಚ್ಚುವ ಕೆಲಸ ಶುರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

BC Patil
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd