Chikkaballapur | ನಿಯಂತ್ರಣ ತಪ್ಪಿದ ಲಾರಿ.. ಇಬ್ಬರು ಸಾವು
ಚಿಕ್ಕಬಳ್ಳಾಪುರ : ಪ್ರಣವ್ ಹೋಟೆಲ್ ಆವರಣಕ್ಕೆ ಕ್ಯಾಂಟರ್ ಲಾರಿ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಮದೇವರಗುಡಿಯ ರಾಷ್ಟ್ರೀಯ ಹೆದ್ದಾರಿ 44 ರ ಬಳಿ ನಡೆದಿದೆ. .
ಬೆಂಗಳೂರು ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ನಿಯಂತ್ರಣ ತಪ್ಪಿ ಹೋಟೆಲ್ ನುಗ್ಗಿದ ಪರಿಣಾಮ ಈ ದುರಂತ ಸಂಭವಿಸಿದೆ.

ಹೋಟೆಲ್ ಸೆಕ್ಯುರಿಟಿ ನಾರಾಯಣಸ್ವಾಮಿ ಹಾಗೂ ಬೈಕ್ ಸವಾರ ಜನಾರ್ದನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇನ್ನು ಈ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.