Chikkaballapur : ಲೈವ್ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ : ನಗರ ಸಭೆ ಕೌನ್ಸಿಲರ್ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಸೊಪ್ಪಿನ ಬೀದಿಯಲ್ಲಿ ನಡೆದಿದೆ.
38 ವರ್ಷದ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಪ್ರಶಾಂತ್ ಚಿಕ್ಕಬಳ್ಳಾಪುರದಲ್ಲಿ ಸ್ಟಿಕ್ಕರ್ ಅಂಗಡಿ ಮಾಡಿಕೊಂಡಿದ್ದು, ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಿಡಿಯೋದಲ್ಲಿ ತನ್ನ ಸಾವಿಗೆ ಚಿಕ್ಕಬಳ್ಳಾಪುರ ನಗರಸಭೆ ಕೌನ್ಸಿಲರ್ ಅಂಬರೀಷ್ ಕಾರಣ ಅಂತಾ ಹೇಳಿದ್ದಾರೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.