ADVERTISEMENT
Friday, June 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Chikkaballapur | 14 ಗ್ರಾಮಗಳ ಕುಡಿಯುವ ನೀರಿನ ಬವಣೆ ನೀಗಿಸಿದ ಸಚಿವ ಡಾ.ಕೆ.ಸುಧಾಕರ್

Mahesh M Dhandu by Mahesh M Dhandu
February 9, 2022
in Hale Mysore, Newsbeat, ಹಳೇ ಮೈಸೂರು
chikkaballapur mla dr k sudhakar saaksha tv
Share on FacebookShare on TwitterShare on WhatsappShare on Telegram

Chikkaballapur | 14 ಗ್ರಾಮಗಳ ಕುಡಿಯುವ ನೀರಿನ ಬವಣೆ ನೀಗಿಸಿದ ಸಚಿವ ಡಾ.ಕೆ.ಸುಧಾಕರ್ chikkaballapur mla dr k sudhakar saaksha tv

ಚಿಕ್ಕಬಳ್ಳಾಪುರ : ಜಿಲ್ಲೆಯ ಮಂಡಿಕಲ್ಲು ಹಾಗೂ ಸುತ್ತಮುತ್ತಲಿನ ಗ್ರಾಮಗಳ ದಶಕಗಳ ಬೇಡಿಕೆ ಈಗ ಈಡೇರಿದೆ. ಈ ಗ್ರಾಮಗಳ ಜನರ ಕುಡಿಯುವ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ‘ಭಗೀರಥ ಹೆಜ್ಜೆ’ ಇರಿಸಿರುವ ಚಿಕ್ಕಬಳ್ಳಾಪುರ ಶಾಸಕ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಯದಾರ್ಲಹಳ್ಳಿ ಕೆರೆಯ ಮೂಲಕ ನೀರು ಹರಿಸುವ ಯೋಜನೆಗೆ ಸರ್ಕಾರದಿಂದ ಅನುಮೋದನೆ ಕೊಡಿಸಿ, ಕಾಮಗಾರಿಗೆ ಸುಗಮ ಹಾದಿ ನಿರ್ಮಿಸಿದ್ದಾರೆ.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

June 18, 2026
10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

June 18, 2026

ಮಂಡಿಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ 14 ಗ್ರಾಮಗಳ ಕನಸು ಈ ಮೂಲಕ ಸಾಕಾರಗೊಂಡಿದೆ. ಇದೇ ಜಿಲ್ಲೆಯಲ್ಲೇ ಹುಟ್ಟಿ ಬೆಳೆದ ಸಚಿವ ಡಾ.ಕೆ.ಸುಧಾಕರ್, ಮಂಡಿಕಲ್ಲು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ಕುಡಿಯುವ ನೀರಿನ ಬೇಡಿಕೆ ಕುರಿತು ಅರಿತಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೊಳಾಯಿ ಸಂಪರ್ಕ ಕಲ್ಪಿಸಿ ನೀರೊದಗಿಸುವ ಜಲಜೀವನ್ ಮಿಷನ್ ಜಾರಿ ಮಾಡಿದ್ದಾರೆ. ಇದೇ ಯೋಜನೆಯಡಿ, 14 ಗ್ರಾಮಗಳಿಗೆ ನೀರು ಪೂರೈಸುವ ಯೋಜನೆ ಸಿದ್ಧಪಡಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 15.48 ಕೋಟಿ ರೂ. ವೆಚ್ಚದ ಯೋಜನೆ ಕುರಿತು ಚರ್ಚೆಯಾಗಿದ್ದು, ಬಳಿಕ ಅನುಮೋದನೆ ದೊರೆತಿದೆ.

chikkaballapur mla dr k sudhakar saaksha tv

2024 ರ ವೇಳೆಗೆ ದೇಶದ ಪ್ರತಿ ಮನೆಗೆ ಕೊಳಾಯಿ ನೀರು ಸೌಲಭ್ಯ ಕಲ್ಪಿಸುವುದು ಜಲಜೀವನ್ ಯೋಜನೆಯ ಗುರಿ. ಈ ಗುರಿ ತಲುಪಲು ಸಚಿವ ಡಾ.ಕೆ.ಸುಧಾಕರ್ ಅವರು ಈ ಯೋಜನೆ ಜಾರಿ ಮಾಡಿದ್ದಾರೆ. ಈಗಾಗಲೇ ಸಚಿವರ ಶ್ರಮದಿಂದ ಎಚ್.ಎನ್. ವ್ಯಾಲಿ ಯಿಂದ ಕೆರೆಗಳನ್ನು ತುಂಬಿಸಲಾಗಿದೆ. ಇದರಿಂದಾಗಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರೆಯುವುದರೊಂದಿಗೆ, ರೈತರಿಗೆ ಕೃಷಿ ಚಟುವಟಿಕೆ ನಡೆಸಲು ನೀರಾವರಿಯ ಸಮಸ್ಯೆಯೂ ನೀಗಿದೆ. ಇದರ ಮುಂದಿನ ಭಾಗವಾಗಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಪೂರೈಸುವ ಕಾರ್ಯದ ಕಡೆಗೆ ಸಚಿವ ಡಾ.ಕೆ.ಸುಧಾಕರ್ ಹೆಜ್ಜೆ ಇರಿಸಿದ್ದಾರೆ.

ಜಲಜೀವನ್ ಮಿಷನ್ ನಡಿ ಜಾರಿ

ಜಲಜೀವನ್ ಮಿಷನ್ ನಲ್ಲಿ ಎಲ್ಲಾ ಮನೆಗಳಲ್ಲಿ ಕೊಳಾಯಿ ಸೌಲಭ್ಯ ಕಲ್ಪಿಸಿ ಕುಡಿಯುವ ನೀರು ಪೂರೈಸಲಾಗುತ್ತದೆ. ಇದೇ ಯೋಜನೆಯಡಿ, ಯದಾರ್ಲಹಳ್ಳಿ ಕೆರೆಯಿಂದ ನೀರು ಪಡೆದು ಪೂರೈಸಲಾಗುತ್ತದೆ. ಸದ್ಯ ಈ ಗ್ರಾಮಗಳಲ್ಲಿ ಒಟ್ಟು 1,420 ಮನೆಗಳು ಹಾಗೂ 5,251 ಜನರಿದ್ದಾರೆ. 2053 ರ ವೇಳೆಗೆ ಈ ಜನಸಂಖ್ಯೆ 6,357 ಆಗಲಿದೆ. ಈ ಅಂದಾಜು ಗಮನದಲ್ಲಿರಿಸಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈವರೆಗೆ ಇಲ್ಲಿನ ಜನರು ಕುಡಿಯುವ ನೀರಿಗಾಗಿ ಬಾವಿ, ಕೆರೆ ಹಾಗೂ ಬೋರ್ ವೆಲ್ ಆಶ್ರಯಿಸಿದ್ದರು. ಜನರು ನೀರು ಪಡೆಯಲು ಕೆರೆ, ಬಾವಿಗಳ ಬಳಿ ಹೋಗಿ ಬರಬೇಕಿತ್ತು. ಈ ಸಂಕಷ್ಟವನ್ನು ತಪ್ಪಿಸಿ ಮನೆಗಳಿಗೆ ನೇರವಾಗಿ ಕೊಳಾಯಿಯಲ್ಲಿ ನೀರು ಬರುವಂತೆ ಸೌಲಭ್ಯ ಕಲ್ಪಿಸಲಾಗುತ್ತದೆ.

Tags: #Saaksha TVChikkaballapurDr. K Sudhakarkarnataka
ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!

by admin
June 18, 2026
0

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

by Shwetha
June 18, 2026
0

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಇನ್ನು ಮುಂದೆ ಸಮಯ ಪಾಲನೆ ಮತ್ತು ಶಿಸ್ತಿನ ಪರ್ವ ಆರಂಭವಾಗಲಿದೆ. ನೌಕರರು ಕಚೇರಿಗೆ ಬಾರದೆ ಅಥವಾ ತಡವಾಗಿ ಬಂದು ಹಾಜರಾತಿ ದಾಖಲಿಸುವ ಹಳೆಯ...

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

5 ರಾಜ್ಯಗಳಲ್ಲಿ ಅವಧಿಗೆ ಮುನ್ನ ಚುನಾವಣೆ ಇಲ್ಲ; ನಿಗದಿತ ವೇಳಾಪಟ್ಟಿಯಂತೆ ಮತದಾನ

by Shwetha
June 18, 2026
0

ದೇಶದ ಐದು ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಗಳು ಅವಧಿಗೆ ಮುನ್ನ ನಡೆಯಲಿವೆ ಎಂಬ ಊಹಾಪೋಹಗಳಿಗೆ ಕೇಂದ್ರ...

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram