ಕೋವಿಡ್ ಆಸ್ಪತ್ರೆಯಲ್ಲಿ ಮಗಳ ಸಾವು : ವೈದ್ಯರ ವಿರುದ್ಧ ಪೋಷಕರ ಆಕ್ರೋಶ
ಚಿಕ್ಕಬಳ್ಳಾಪುರ : ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಮೃತಳ ಪೋಷಕರು ಆರೋಪಿ ಆಕ್ರೋಶ ಹೊರಹಾಕುತ್ತಿದ್ದಾರೆ.
ಚಿಂತಾಮಣಿ ತಾಲ್ಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ಅನುಪಮಾ (25) ಎಂಬ ಯುವತಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇದೀಗ ಆ ಯುವತಿ ಮೃತಪಟ್ಟಿದ್ದು, ಪೋಷಕರು ಜಿಲ್ಲಾಸ್ಪತ್ರೆಯ ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ವೈದರ ನಿರ್ಲಕ್ಷ್ಯದಿಂದಲೇ ತಮ್ಮ ಮಗಳು ಮೃತಪಟ್ಟಿದ್ದಾಳೆ ಎಂದು ಆಸ್ಪತ್ರೆ ಎದುರು ಕಣ್ಣೀರು ಹಾಕುತ್ತಿದ್ದಾರೆ.










