Chikkamagalur | ಪಾಕ್ ಗೆಲುವನ್ನ ಸಂಭ್ರಮಿಸಿದ ಕಿಡಿಗೇಡಿಗಳ ಬಂಧನ
ಚಿಕ್ಕಮಗಳೂರು : ಟಿ 20 ವಿಶ್ವಕಪ್ ನ ಮೊದಲ ಸೆಮಿ ಫೈನಲ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ತಂಡ ಗೆಲುವು ಸಾಧಿಸಿದ್ದು ಗೊತ್ತೇ ಇದೆ.
ಈ ನಡುವೆ ಚಿಕ್ಕಮಗಳೂರಿನಲ್ಲಿ ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ನಾಲ್ವರು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಅಸ್ಸಾಂ ಮೂಲದ ಅಜರ್ ಅಲಿ, ಆಹಿಲ್ ಉದ್ದಿನ್, ಸೇರಿದಂತೆ ಮತ್ತಿಬ್ಬರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇವರ ವಿರುದ್ಧ ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದಿರುವ ಆರೋಪವಿದೆ.
ಸೆಮಿ ಫೈನಲ್ ನಲ್ಲಿ ಪಾಕಿಸ್ತಾನ ತಂಡ ಗೆಲುವು ಸಾಧಿಸುತ್ತಿದ್ದಂತೆ ಈ ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರಂತೆ.
ಈ ವಿಷಯ ತಿಳಿದ ಸ್ಥಳೀಯರು ಎಸ್ಟೇಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ.
ನಂತರ ಎಸ್ಟೇಟ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಖಾಕಿ ಪಡೆ ವಿಚಾರಣೆ ನಡೆಸುತ್ತಿದ್ದಾರೆ.
ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.