ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ಕೊರೊನಾ ಹಾವಳಿ ಮುಂದುವರೆದಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಹೊಸದಾಗಿ ಒಟ್ಟು 111 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇಂದು ಒಟ್ಟು ಮೂರು ಜನ ಮಹಾಮಾರಿಗೆ ಪ್ರಾಣ ಕಳೆದುಕೊಂಡಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2622ರ ಗಡಿ ತಲುಪಿದೆ. ಈವರೆಗೂ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 53ಕ್ಕೇರಿಕೆಯಾಗಿದೆ. ಇನ್ನೂ ಗುಣಮುಖರ ಸಂಖ್ಯೆಯಲ್ಲೂ ದಿನೇ ದಿನೇ ಸುದಾರಣೆ ಕಂಡುಬರುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ.
ಒಟ್ಟು ಸೋಂಕಿತರ ಪೈಕಿ ಜಿಲ್ಲೆಯಲ್ಲಿ 1663 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಇನ್ನೂ 906 ಸಕ್ರಿಯ ಪ್ರಕರಣಗಳು ಇದೆ.