ಚಿಕ್ಕಮಗಳೂರು – ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರನ್ನು ಕೇರ್ ಮಾಡದೇ ಸಿಬ್ಬಂದಿ ನಿರ್ಲಕ್ಷ್ಯ
ಚಿಕ್ಕಮಗಳೂರು : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಮತ್ತೊಂದೆಡೆ ಜಿಲ್ಲಾಸ್ಪತ್ರೆಗಳಲ್ಲಿ ಅವ್ಯವಸ್ಥೆ ತಾಂಡವವಾಡ್ತಿದೆ.. ಸೂಕ್ತ ವ್ಯವಸ್ತೆಗಳಿಲ್ಲದೇ , ಸ್ವಚ್ಚಥೆಯಿಲ್ಲದೇ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಕೋವಿಡ್ ಸೋಂಕಿತರು ಪರದಾಡುವಮತಾಗಿದೆ.
ಇದೇ ರೀತಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಕೊರೊನಾ ಸೋಂಕಿತರು ಬೇಸತ್ತುಹೋಗಿದ್ಧಾರೆ. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಐಸಿಯೂ ವಾರ್ಡ್ ಪಕ್ಕದಲ್ಲೇ ಕಸದ ರಾಶಿ ಬಿದ್ದಿದ್ದು, ಪಿಪಿಇ ಕಿಟ್ ಸೇರಿದಂತೆ ಕಸವನ್ನ ವಾರ್ಡ್ ಪಕ್ಕದಲ್ಲೇ ಹಾಕಿ ಸಿಬ್ಬಂದಿ ನಿರ್ಲ್ಷ್ಯ ವಹಿಸಿದ್ದಾರೆ. ಸೋಂಕಿತರ ಆರೋಗ್ಯದ ಬಗ್ಗೆ ತಲೆ ಕೆಡಿಸಿಕೊಳ್ಳದೇ ಬೇಕಾ ಬಿಟ್ಟಿ ವರ್ತನೆ ತೋರುತ್ತಿದ್ದಾರೆ. ಹೀಗಾಗಿ ಜಿಲ್ಲಾಸ್ಪತ್ರೆ ಸಿಬ್ಬಂದಿ ವಿರುದ್ಧ ಕೊರೊನಾ ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.