ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ವರುಣ ಅಬ್ಬರ ಮುಂದುವರೆಸಿದ್ದಾನೆ. ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಮಲೆನಾಡಿಗರು ತತ್ತರಿಸಿಹೋಗಿದ್ದಾರೆ. ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ ಭಾಗದಲ್ಲಿ ಭಾರೀ ಮಳೆಯಾಗಿದೆ. ತುಂಗಾ ನದಿ ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ನದಿ ಪಾತ್ರದ ಜನರಲ್ಲಿ ನಡುಕ ಶುರುವಾಗಿದೆ. ತುಂಗಾ ನದಿ ಉಕ್ಕಿ ಹರಿಯುತ್ತಿದ್ದ ಪರಿಣಾಮ ರಸ್ತೆ ಜಲಾವೃತಗೊಂಡು ರಸ್ತೆಯಲ್ಲಿದ್ದ ಕಾರು ಮುಳುಗಡೆಯಾದ ಘಟನೆ ನಡೆದಿದೆ. ಶೃಂಗೇರಿ ದೇವಾಲಯದ ಪಾರ್ಕಿಂಕ್ ಸ್ಥಳದಲ್ಲಿ ಈ ಘಟನೆ ನಡೆದಿದೆ. ಇನ್ನೂ ರಸ್ತೆ ಜಲಾವೃತಗೊಂಡ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಗಿ ಜನರು ಪರದಾಡುವಂತಾಗಿದೆ. ಅಷ್ಟೇ ಅಲ್ಲದೇ ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿತ್ತಿದ್ದು, ಜನರ ಪರಿಸ್ಥಿತಿ ಹೇಳಿತೀರದಂತಾಗಿದೆ.
ಇನ್ನೂ ಮಹಾಮಾಳೆಗೆ ಶೃಂಗೇರಿ ಪಟ್ಟಣದಲ್ಲಿ ತುಂಗೆಯ ರಭಸಕ್ಕೆ ಹಲವು ಪ್ರದೇಶಗಳು ಮುಳುಗಡೆಯಾಗಿವೆ. ಶಾರದಾ ಬೀದಿಯ ಅಕ್ಕಪಕ್ಕದ ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ. ಕುರುಬರ ಕೇರಿ ಬಳಿ ಮನೆಗಳಿಗೆ ಮನೆಗಳಿಗೆ ನೀರು ನುಗ್ಗಿದೆ. ಇತ್ತ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲು ಅಗ್ನಿ ಶಾಮಕ ದಳ ಸಿಬ್ಬಂದಿ ಹರಸಾಹಸ ಪಡುವಂತಾಗಿದೆ. ಬೋಟ್ ಗಳ ಸಹಾಯದಿಂದ ರಕ್ಷಣಾ ಪಡೆ ಸಿಬ್ಬಂದಿ ರಕ್ಷಾಣ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...








