ಮಲೆನಾಡಲ್ಲಿ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ
ಚಿಕ್ಕಮಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಕರಾವಳಿ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗ್ತಿದೆ. ತೌಖ್ತೆ ಚಂಡಮಾರುತದ ಎಫೆಕ್ಟ್ ನಿಂದಾಗಿ ಮಲೆನಾಡು ಚಿಕ್ಕಮಗಳೂರಿನಲ್ಲಿ ಹಲವೆಡೆ ಧಾರಾಕಾರ ಮಲೆಯಾಗ್ತಿದೆ. ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಲೇ ಇದ್ದು , ಕಾಫಿನಾಡಿನ ಜನ ಹೈರಾಣಾಗಿದ್ದಾರೆ. ಚಿಕ್ಕಮಗಳೂರು, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲೂಕುಗಳು ಸೇರಿದಂತೆ ಹಲವೆಡೆ ಮಳೆಯಾಗ್ತಿದೆ.
ಇನ್ನೂ ಇಂದಿನಿಂದ 2 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ 2 ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಮಲೆನಾಡು ಭಾಗದಲ್ಲಿರುವ ಜನರಿಗೆ ಎಚ್ಚರದಿಂದಿರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಕೊಡಗಿನಲ್ಲಿ ಗಾಳಿ ಸಹಿತ ಭಾರೀ ಮಳೆ – ರೆಡ್ ಅಲರ್ಟ್ ಘೋಷಣೆ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.