chikkamagaluru ಮಲೆನಾಡು ಭಾಗದಲ್ಲಿ ಮಳೆರಾಯನ ಅಬ್ಬರ
ಚಿಕ್ಕಮಗಳೂರು : ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ.
ಕಳೆದೊಂದು ವಾರದಿಂದ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಮಧ್ಯಾಹ್ನದ ನಂತರ ಆರಂಭವಾದ ಮಳೆ ಒಂದೆರಡು ಗಂಟೆಗಳ ಕಾಲ ಧಾರಾಕಾರವಾಗಿ ಸುರಿಯುತ್ತಿದೆ.
ಗುರುವಾರ ಜಿಲ್ಲೆಯ ಕಡೂರು, ಬೀರೂರು, ಅಜ್ಜಂಪುರ ಭಾಗದಲ್ಲಿ ಭಾರೀ ಮಳೆ ಸುರಿದಿದೆ. ಸಂಜೆ ಬಳಿಕ ಆರಂಭವಾದ ಮಳೆ ಸುಮಾರು ಒಂದು ಗಂಟೆಗಳ ಕಾಲ ಗುಡುಗು-ಸಿಡಿಲಿನೊಂದಿಗೆ ಅಬ್ಬರಿಸಿದೆ.
ಕಳೆದೊಂದು ವಾರದಿಂದ ಅಗತ್ಯಕ್ಕನುಗುಣವಾಗಿ ಮಳೆ ಸುರಿಯುತ್ತಿರೋದ್ರಿಂದ ಜಿಲ್ಲೆಯ ಜನರಲ್ಲಿ ಸಂತಸ ಮನೆ ಮಾಡಿದೆ.
ಇದು ಒಂದು ಕಡೆಯಾಗಿದ್ದರೇ ಮತ್ತೊಂದು ಕಡೆ ಭಾರಿ ಗಾಳಿಯೊಂದಿಗೆ ಮಳೆ ಸುರಿಯುತ್ತಿರುವುದರಿಂದ ಅಲ್ಲಲ್ಲಿ ಮರಗಳು ಮುರಿದು ಬೀಳುತ್ತಿದ್ದು, ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ವಿದ್ಯುತ್ ಸಂಪರ್ಕ ಕಡಿತವಾಗಿ ಸಂಕಷ್ಟ ಅನುಭವಿಸುವಂತಾಗಿದೆ.