Chikmagalur | ಕೊಟ್ಟಿಗೆಹಾರ ಸಮೀಪ ಹೊತ್ತಿ ಉರಿದ ಅರಣ್ಯ
ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗೂಲ್ ಎಂಬ ಅರಣ್ಯದಲ್ಲಿ ಗುಡ್ಡಕ್ಕೆ ಬೆಂಕಿ ತಗುಲಿ ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.
ಮಳೆಗಾಲದಲ್ಲಿ ಕೊಟ್ಟಿಗೆಹಾರ ಸುತ್ತಮುತ್ತ ಭಾರಿ ಮಳೆ ಸುರಿಯುದರಿಂದ ಈ ಪ್ರದೇಶ ಹಸಿರುಮಯವಾಗಿರುತ್ತೆ.
ಆದ್ರೆ ಈಗ ಬೇಸಿಗೆ ಕಾಲ ಆರಂಭವಾಗಿದ್ದು, ಬೆಟ್ಟಗುಡ್ಡಗಳೆಲ್ಲಾ ಒಣಗಿ ನಿಂತಿದೆ. ಕಿಡಿ ಬೆಂಕಿ ಸಿಕ್ಕರೂ ಇಡೀ ಕಾಡೇ ಹೊತ್ತಿ ಉರಿಯುತ್ತದೆ.
ಇಂತಹ ಸಂದರ್ಭದಲ್ಲಿ ಯಾರೋ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಸಾಕಷ್ಟು ಅರಣ್ಯ ಸಂಪತ್ತು ನಾಶವಾಗಿದೆ.
ಇನ್ನು ಬೆಂಕಿ ತನ್ನ ಕಬಂದ ಬಾಹುಗಳನ್ನು ಚಾಚುತ್ತಿದ್ದಂತೆ ಸ್ಥಳೀಯ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಕೂಡ ಸ್ಥಳಕ್ಕಾಗಮಿಸಿ ಬೆಂಕಿಯನ್ನ ನಂದಿಸಿದ್ದಾರೆ.
ಅರಣ್ಯ ಅಧಿಕಾರಿಗಳು ಮರದ ಟೊಂಗೆಗಳ ಮೂಲಕ ಬೆಂಕಿಯನ್ನು ನಂದಿಸಿದ್ದಾರೆ. chikmagalur-kottigehara fire accident