ಡೆಂಗ್ಯೂಗೆ ರಾಯಚೂರಲ್ಲಿ ಮಗು ಬಲಿ Raichur saaksha tv
ರಾಯಚೂರು : ಜಿಲ್ಲೆಯಲ್ಲಿ ಡೆಂಗ್ಯೂವಿಗೆ ಎರಡನೇ ಬಲಿಯಾಗಿದೆ. ಜಿಲ್ಲೆಯಾದ್ಯಂತ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮನೆಮಾಡಿದೆ.
ಸಿಂಧನೂರು ನಗರದ ಮಹಿಬೂಬಿಯಾ ಕಾಲೋನಿಯಲ್ಲಿ 6 ವರ್ಷದ ಮಗು ಡೆಂಗ್ಯೂಗೆ ಬಲಿಯಾಗಿದ್ದಾಳೆ. ಸೋನು ಮೃತ ದುರ್ದೈವಿ.
ಈ ಸಾವಿನೊಂದಿಗೆ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಇಬ್ಬರು ಮಕ್ಕಳು ಉಸಿರು ನಿಲ್ಲಿಸಿದಂತೆಯಾಗಿದೆ. ಇನ್ನು ರಿಮ್ಸ್ ಆಸ್ಪತ್ರೆಯೊಂದರಲ್ಲೇ 30ಕ್ಕೂ ಅಧಿಕ ಮಕ್ಕಳಲ್ಲಿ ಡೆಂಗ್ಯೂ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಇದಲ್ಲದೇ ಜಿಲ್ಲೆಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1,500ಕ್ಕೂ ಅಧಿಕ ಮಕ್ಕಳು ವೈರಲ್ ಫೀವರ್ ಹಾಗೂ ಡೆಂಗ್ಯೂನಿಂದಾಗಿ ದಾಖಲಾಗಿದ್ದಾರೆ.