ಗಂಡು ಮಗುವಿನ ಅಪಹರಣ Udupi : ಆರೋಪಿ ಬಂಧನ
ಉಡುಪಿ : ನಗರದಲ್ಲಿ ಗಂಡು ಮಗುವನ್ನ ಕಿಡ್ನಾಪ್ ಮಾಡಿದ್ದ ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪರಶುರಾಮ್ ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಉತ್ತರಕನ್ನಡ ಜಿಲ್ಲೆಯ ಕುಮಟ ರೈಲ್ವೆ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ನಿನ್ನೆ ಬೆಳಿಗ್ಗೆ ಉಡುಪಿಯ ಕರಾವಳಿ ಜಂಕ್ಷನ್ ನಲ್ಲಿ ಪರಶುರಾಮ್ ಮಗುವನ್ನು ಕಿಡ್ನಾಪ್ ಮಾಡಿದ್ದ.
ಮಗುವನ್ನ ಅಪಹರಿಸಿ ಖಾಸಗಿ ಬಸ್ಸು ಹತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಮಗುವಿನ ಪೋಷಕರು ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಅನ್ವಯ ಪೊಲೀಸರು ಸಿಸಿ ಟಿವಿ ದೃಶ್ಯಗಳ ಆಧಾರ ಮೇಲೆ ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.