ಬಾಲ್ಯವಿವಾಹದಲ್ಲಿ ಕರ್ನಾಟಕವೇ ಫಸ್ಟ್..!
ನವದೆಹಲಿ : ಭಾರತ ದೇಶದಾದ್ಯಂತ 2020ರಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಅದರಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಕಳೆದ ವರ್ಷ ರಾಜ್ಯದಲ್ಲಿ ಬರೋಬ್ಬರಿ 184 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ತಿಳಿಸಿದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ದತ್ತಾಂಶಗಳ ಪ್ರಕಾರ, 2020 ರಲ್ಲಿ, ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಒಟ್ಟು 785 ಪ್ರಕರಣಗಳು ದಾಖಲಾಗಿವೆ. ಇದು ಈ ಹಿಂದಿನ ವರ್ಷಕ್ಕೆ ಹೋಲಿಸಿದರೇ ಶೇಕಡಾ 50ರಷ್ಟು ಹೆಚ್ಚಾಗಿದೆ.
ಕರ್ನಾಟಕದಲ್ಲಿ ಅತಿ ಹೆಚ್ಚು ಅಂದರೇ 184 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ಅಸ್ಸಾಂನಲ್ಲಿ 138, ಪಶ್ಚಿಮ ಬಂಗಾಳದಲ್ಲಿ 98, ತಮಿಳುನಾಡಲ್ಲಿ 77 ಮತ್ತು ತೆಲಂಗಾಣದಲ್ಲಿ 62 ಪ್ರಕರಣಗಳು ದಾಖಲಾಗಿವೆ. ಇದನ್ನು ಗಮನಿಸಿದರೇ ಬಾಲ್ಯವಿವಾದದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿರುವುದು ಗೊತ್ತಾಗುತ್ತಿದೆ.







