ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ | ಮಂಡ್ಯದಲ್ಲಿ ಪ್ರತಿಭಟನೆ Mandya saaksha tv
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಂಡ್ಯದಲ್ಲಿ ಪೌರ ಕಾರ್ಮಿಕರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದರು.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಶುರುವಾದ ಬೃಹತ್ ಪ್ರತಿಭಟನಾ ಮೆರವಣಿಗೆ ಡಿಸಿ ಕಚೇರಿ ವರೆಗೆ ನಡೆಯಿತು.
ಪ್ರತಿಭಟನೆಯಲ್ಲಿ ಆರೋಪಿ ಪರಮೇಶನನ್ನ ಗಲ್ಲಿಗೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಪೌರ ಕಾರ್ಮಿಕರ ಕುಟುಂಬದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ. ಇಂತಹ ಕೃತ್ಯ ಎಸಗಿರುವ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು, ಗುಂಡಿಟ್ಟು ಕೊಲ್ಲಬೇಕು.
ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು, ಜೊತೆಗೆ ಪರಿಹಾರ ನೀಡುವಂತೆ ಒತ್ತಾಯಿಸಲಾಯಿತು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.