ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಕ್ಕಳ ಮಾರಾಟ ಮಾಡ್ತಿದ್ದ ಗ್ಯಾಂಗ್ ಪೊಲೀಸರ ಬಲೆಗೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಕ್ಕಳಿಲ್ಲದ ಪೋಷಕರನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಮಕ್ಕಳ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಪೊಲೀಸರ ಬೆಲೆಗೆ ಬಿದ್ದಿದೆ. ಬೆಂಗಳೂರು ದಕ್ಷಿಣ ಪೊಲೀಸರ ಕಾರ್ಯಾಚರಣೆಯಲ್ಲಿ ಸುಮಾರು 13 ಮಕ್ಕಳನ್ನು ರಕ್ಷಿಸಲಾಗಿದೆ.
ಆರೋಪಿಗಳು ಬಡವರಿಂದ ಕಡಿಮೆ ಹಣಕ್ಕೆ ಮಕ್ಕಳನ್ನು ಖರೀದಿಸಿ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಡಿಸಿಪಿ ಹರೀಶ್ ಪಾಂಡೆ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಗ್ಯಾಂಗ್ 2ರಿಂದ 3 ಲಕ್ಷ ರೂಪಾಯಿಗಳಿಗೆ ಮಕ್ಕಳನ್ನು ಮಾರುತ್ತಿದ್ದ ವಿಚಾರ ಗೊತ್ತಾಘಿದೆ.
ಇಂದೋರ್ : 5 ವರ್ಷದಲ್ಲಿ 75 ಯುವತಿಯರ ಮದುವೆಯಾಗಿ ವೇಶ್ಯಾವಾಟಿಗೆ ತಳ್ಳಿದ ನೀಚ
ಆರೋಪಿಗಳನ್ನ ಮಹೇಶ್ ಕುಮಾರ್, ದೇವಿಷಣ್ಮುಗಮ್ಮ, ಜನಾರ್ಧನ್, ರಂಜನಾ ದೇವಿಪ್ರಸಾದ್, ಧನಲಕ್ಷ್ಮೀ ಎಂದು ಗುರುತಿಸಲಾಗಿದೆ. ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಈವರೆಗೂ ಒಟ್ಟು 18 ಮಕ್ಕಳನ್ನು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮರು ಮದುವೆಗಾಗಿ ಕುರುಳಿನ ಕುಡಿಯನ್ನೇ ಮಾರಿದ ಪಾಪಿ ತಾಯಿ