ಅಗರ್ತಲಾ: ತಾಯಿಯನ್ನು ಮರಕ್ಕೆ ಕಟ್ಟಿ ಮಕ್ಕಳಿಬ್ಬರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಪಾಪಿಗಳು ತಾಯಿಯನ್ನು (Mother) ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟು ಹಾಕಿದ್ದಾರೆ. ಈ ಅಮಾನವೀಯ ಘಟನೆ ಪಶ್ಚಿಮ ತ್ರಿಪುರಾದಲ್ಲಿ (Tripura) ನಡೆದಿದೆ.
ಕೃತ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎನ್ನಲಾಗಿದೆ. ಮಹಿಳೆಯನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಲಾಗಿದೆ ಎಂಬ ಮಾಹಿತಿ ತಿಳಿದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಜಿರಾನಿಯಾದ ಉಪವಿಭಾಗದ ಪೊಲೀಸ್ (Police) ಅಧಿಕಾರಿ ಕಮಲ್ ಕೃಷ್ಣ ಕೊಲೊಯ್ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಿಳೆಯ ಕಳೆದ ಒಂದೂವರೆ ವರ್ಷದ ಹಿಂದೆ ತನ್ನ ಪತಿಯನ್ನು ಕಳೆದುಕೊಂಡಿದ್ದರು. ಆನಂತರ ತನ್ನ ಮಕ್ಕಳೊಂದಿಗೆ ವಾಸಿಸುತ್ತಿದ್ದರು ಎನ್ನಲಾಗಿದೆ.