ಲಸಿಕೆ ಹಾಕಿಸಿಕೊಂಡ ಮಕ್ಕಳು: ಮಂಡ್ಯ Saaksha Tv
ಮಂಡ್ಯ: ಇಂದಿನಿಂದ ದೇಶಾದ್ಯಂತ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ಪ್ರಾರಂಭವಾಗಿದೆ. ಇದರ ಹಿನ್ನಲೆ ಇಂದು ಸಕ್ಕರೆ ನಾಡು ಮಂಡ್ಯದಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಮಂಡ್ಯದ ಸರ್ಕಾರಿ ಬಾಲಕಿಯರ ಕಾಲೇಜು ಕಲ್ಲುಕಟ್ಟದಲ್ಲಿ ಲಸಿಕೆ ಅಭಿಯಾನಕ್ಕೆ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಚಾಲನೆ ನೀಡಿದರು. ಸಾವಿರಾರು ಮಕ್ಕಳು ಲಸಿಕೆ ಹಾಕಿಸಿಕೊಂಡರು.
ಇಷ್ಟುದಿನದಿಂದ ಹಿರಿಯರಿಗೆ ಲಸಿಕೆ ವಿತರಣೆ ಮಾಡಲಾಗಿತ್ತಿದೆ. ಇಂದಿನಿಂದ ಮಕ್ಕಳಿಗೂ ಲಸಿಕೆ ಸಿಕ್ಕಿದೆ, ಎಲ್ಲರೂ ಸಹ ಕಡ್ಡಾಯವಾಗಿ ಲಸಿಕೆ ಪಡೆದು ಕೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮನವಿ ಮಾಡಿಕೊಂಡರು
ಇದೇ ಸಂದರ್ಭದಲ್ಲಿ ಶಾಸಕ ಎಂ.ಶ್ರೀನಿವಾಸ್, ಸಿಇಓ ದಿವ್ಯಪ್ರಭು, ಡಿಎಚ್ಓ ಡಾ.ಧನಂಜಯ್, ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.