ದೆಹಲಿ : ಭಾರತ ಸರ್ಕಾರ ಟಿಕ್ ಟಾಕ್ ಸೇರಿದಂತೆ ಚೀನಾದ 59 ಆಪ್ ಗಳನ್ನು ನಿಷೇಧಿಸಿ ಆದೇಶಿಸಿದೆ. ಇದರ ಬೆನ್ನಲ್ಲೇ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಅವರು ಆಪ್ ಗಳ ಬ್ಯಾನ್ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿ ಕಳವಳ ವ್ಯಕ್ತಪಡಿಸಿದ್ದಾರೆ.
‘ನಾವು ಕೈಕಟ್ಟಿಕೊಂಡು ಕುಳಿತಿಲ್ಲ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಚೀನೀ ವ್ಯವಹಾರಗಳು ಅಂತಾರಾಷ್ಟ್ರೀಯ ಮತ್ತು ಸ್ಥಳೀಯ ಕಾನೂನು ನಿಬಂಧನೆಗಳಿಗೆ ಬದ್ಧವಾಗಿರುತ್ತವೆ. ಇದನ್ನು ಚೀನಾ ಯಾವಾಗಲೂ ಒತ್ತಿ ಹೇಳುತ್ತಿರುತ್ತದೆ. ಚೀನಾ ಸೇರಿದಂತೆ ಅಂತಾರಾಷ್ಟ್ರೀಯ ಹೂಡಿಕೆದಾರರ ಕಾನೂನು ಹಕ್ಕುಗಳನ್ನ ಎತ್ತಿಹಿಡಿಯುವ ಜವಾಬ್ದಾರಿಯನ್ನು ಭಾರತ ಸರ್ಕಾರ ಹೊಂದಿದೆ ಎಂದು ಭಾರತದ ಹೊಣೆಗಾರಿಕೆಯನ್ನು ಉಲ್ಲೇಖಿಸಿ, ಎಚ್ಚರಿಕೆಯ ಮಾತು ಹೇಳಿದ್ದಾರೆ.