ಕಲಬುರಗಿ: ನಕಲಿ ಬಿಲ್ಗೆ ಸಹಿ ಹಾಕುವಂತೆ ಒತ್ತಾಯಿಸಿ ಪುರಸಭೆ ಸದಸ್ಯನೊಬ್ಬ ಅಧಿಕಾರಿಗೆ ಧಮ್ಕಿ ಹಾಕಿ ಹಲ್ಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದ್ದು, ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲೇ ಸದಸ್ಯ ಆನಂದ್ ಟೈಗರ್ ಹಾಗೂ ಆತನ ಚೇಲಾಗಳು ಪುರಸಭೆ ಮುಖ್ಯಾಧಿಕಾರಿ ಅಭಯ್ ಮೇಲೆ ಹಲ್ಲೆ ಮಾಡಿದ್ದಾರೆ.
ತನ್ನ ಬೆಂಬಲಿಗ ಶಶಿಕುಮಾರ್ ಜೊತೆ ಬಂದ ಆನಂದ್, ನಕಲಿ ಬಿಲ್ ಗಳಿಗೆ ಸಹಿ ಮಾಡಿ, ಚೆಕ್ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾನೆ. ನಕಲಿ ಚೆಕ್ಗಳಿಗೆ ಸಹಿ ಮಾಡಲು ಆಗಲ್ಲ ಎಂದಿದ್ದಕ್ಕೆ ಮುಖ್ಯಾಧಿಕಾರಿ ಅಭಯ್ ಮೇಲೆ ಹಲ್ಲೆ ಮಾಡಿ ಮಾಡಿದ ಆನಂದ್ ಟೈಗರ್, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಪುರಸಭೆ ಕಚೇರಿಯಲ್ಲಿಯೇ ಆನಂದ್ ಟೈಗರ್ ನ ದರ್ಪ ಹಾಗೂ ಗುಂಡಾಗಿರಿ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಘಟನೆ ನಂತರ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಸದಸ್ಯ ಆನಂದ್ ಮತ್ತು ಆತನ ಸಹಚರ ಶಶಿಕುಮಾರ್ ವಿರುದ್ಧ ದೂರು ದಾಖಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








