ಚಿಂತಾಮಣಿ : ಎರಡು ಗುಂಪುಗಳ ಮಧ್ಯೆ ಮಾರಾಮಾರಿ Chintamani
ಚಿಕ್ಕಬಳ್ಳಾಪುರ : ಹಳೇ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶ್ರೀನಿವಾಸ್ ಗುಂಪು ಹಾಗೂ ಸುರೇಶ್ ಗುಂಪುಗಳ ನಡುವೆ ಗಲಾಟೆ ನಡೆದಿದೆ.
ಈ ವೇಳೆ ಸುರೇಶ್ ಎಂಬುವವರಿಗೆ ಶ್ರೀನಿವಾಸ್ ಗ್ಯಾಂಗ್ ಹಿಗ್ಗಾಮುಗ್ಗಾ ಹಲ್ಲೆ ಮಾಡಿದೆ.
ಗಲಾಟೆ ವೇಳೆ ಸುರೇಶ ಸೇರಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಸಂಬಂಧ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.