ನಟ ಪೊನ್ನಂಬಲಂ ಚಿಕಿತ್ಸೆಗೆ 2 ಲಕ್ಷ ರೂಪಾಯಿ ನೀಡಿದ ಮೆಗಾಸ್ಟಾರ್ ಚಿರಂಜೀವಿ..!
ಚೆನ್ನೈ: ಮೆಗಾಸ್ಟಾರ್ ಚಿರಂಜೀವಿ ಅವರು ಸದಾ ಕಷ್ಟ ಅಂದವರ ಸಹಾಯಕ್ಕೆ ಮುಂದಿರುತ್ತಾರೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರುವ ಚಿರಂಜೀವಿ ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಸಹಾಯಗಳನ್ನ ಮಾಡ್ತಿದ್ಧಾರೆ.
ಇದೀಗ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ವಿಲ್ಲನ್ ಪಾತ್ರಗಳಲ್ಲಿ ಮಿಂಚಿದ್ದ ನಟ ಪೊನ್ನಂಬಲಂ ಚಿಕಿತ್ಸೆಗೆ ನೆರವಾಗಿದ್ದಾರೆ.. ಹೌದು ಪೊನ್ನಂಬಲಂ ಅವರು ಕಿಡ್ನಿ ವೈಫಲ್ಯದಿಂದ ಬಳಲುತಿದ್ದು, ಅವರ ಚಿಕಿತ್ಸೆಗೆ 2 ಲಕ್ಷ ರೂಪಾಯಿ ಧನಸಹಾಯ ಮಾಡಿದ್ಧಾರೆ.
ಈ ಬಗ್ಗೆ ಪೊನ್ನಂಬಲಂ ಅವರು ವೀಡಿಯೋ ಮಾಡಿ ಚಿರಂಜೀವಿಯವರಿಗೆ ಧನ್ಯವಾದ ತಿಳಿಸಿದ್ದಾರೆ. ಹಲವು ದಿನಗಳಿಂದ ಪೊನ್ನಂಬಲಂರವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಸಹಾಯಕ್ಕಾಗಿ ಆರ್ಥಿಕ ಸಹಾಯಬೇಕಿದೆ ಎಂದು ಆಸ್ಪತ್ರೆಯ ಬೆಡ್ ಮೂಲಕ ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಇದೀಗ ಪೊನ್ನಂಬಲಂ ಕಿಡ್ನಿ ಆಪರೇಷನ್‍ಗೆ ಮೆಗಾಸ್ಟಾರ್ ಚಿರಂಜೀವಿ 2 ಲಕ್ಷ ರೂ. ನೀಡುವ ಮೂಲಕ ಸಹಾಯ ಹಸ್ತ ಚಾಚಿದ್ದಾರೆ. ಹೀಗಾಗಿ ಪೊನ್ನಂಬಲಂ, ಚಿರಂಜೀವಿ ಅಣ್ಣನಿಗೆ ನಮಸ್ತೇ. ನನ್ನ ಕಿಡ್ನಿ ಆಪರೇಷನ್‍ಗೆ ನೀವು 2 ಲಕ್ಷ ನೀಡಿದ್ದು, ಬಹಳ ಸಹಾಯವಾಯಿತು. ಜೀವನಪೂರ್ತಿ ಈ ಸಹಾಯವನ್ನು ನಾನು ಮರೆಯಲ್ಲ. ಆ ದೇವರು ನಿಮಗೆ ಒಳ್ಳೆಯದು ಮಾಡಲಿ’ ಎಂದು ವೀಡಿಯೋ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.
https://twitter.com/Team_Chiru/status/1395639335332900864
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ








