Chiranjeevi Godfather | ಮೆಗಾಸ್ಟಾರ್ ಸಿನಿಮಾದಲ್ಲಿ ಪೂರಿ ಜಗನ್ನಾಥ್..!
ಮೆಗಾಸ್ಟಾರ್ ಚಿರಂಜೀವಿ ನಾಯಕನಾಗಿ ಮೋಹನ್ ರಾಜಾ ನಿರ್ದೇಶನದ ‘ಗಾಡ್ ಫಾದರ್‘ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.
ಇದು ಮಲಯಾಳಂನಲ್ಲಿ ಯಶಸ್ವಿಯಾದ ‘ಲೂಸಿಫರ್‘ ಚಿತ್ರದ ತೆಲುಗು ರಿಮೇಕ್ ಆಗಿದೆ.
ಈ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಅವರು ತಮ್ಮ ಪಾತ್ರದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ.
ಈ ನಡುವೆ ಮತ್ತೊಂದು ಸುದ್ದಿ ಹೊರಬಂದಿದ್ದು, ಟಾಲಿವುಡ್ ನ ಸ್ಟಾರ್ ನಿರ್ದೇಶಕ ಪೂರಿ ಜಗನ್ನಾಥ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದರಂತೆ.
ಈ ವಿಷಯವನ್ನು ಸ್ವತಃ ಚಿರಂಜೀವಿಯೇ ಟ್ವಿಟ್ಟರ್ ನಲ್ಲಿ ಬಹಿರಂಗಪಡಿಸಿದ್ದಾರೆ.
ಈ ಚಿತ್ರದಲ್ಲಿ ಪೂರಿ ಪತ್ರಕರ್ತನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.
ನಯನತಾರಾ, ಸತ್ಯದೇವ್, ಬ್ರಹ್ಮಾಜಿ ಮತ್ತು ಸುನೀಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಚಿತ್ರಕ್ಕೆ ತಮನ್ ಸಂಗೀತ ನೀಡುತ್ತಿದ್ದಾರೆ.
chiranjeevi-puri-jagannadh-play-key-role-godfather-movie