ಆಂಧ್ರದಲ್ಲಿ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ‘ಮೆಗಾ’ ಸ್ಟಾರ್ಸ್..!
ಹೈದರಾಬಾದ್ : ದೇಶಾದ್ಯಂತ ಹಲವು ದಿನಗಳಿಂದ ಸುರಿದ ಭಾರೀ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ.. ರೈತರು ಬೆಲೆ ಕಳೆದುಕೊಂಡು ಕಣ್ಣೀರು ಹಾಕಿದ್ರೆ, ಕೆಲವರು ಜೀವ ಕಳೆದುಕೊಂಡಿದ್ದಾರೆ.. ಹಲವರು ಮನೆ ಕಳೆದುಕೊಂಡಿದ್ದಾರೆ.. ಆಂಧ್ರಪ್ರದೇಶದಲ್ಲೂ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ..
ಇದೀಗ ಪ್ರವಾಸ ಸಂತ್ರಸ್ತರ ನೆರವಿಗೆ ಮೆಗಾಸ್ಟಾರ್ ಚಿರಂಜೀವಿ ಹಾಗೂ ಅವರ ಪುತ್ರ ನಟ ರಾಮ್ ಚರಣ್ ತೇಜ ಅವರು ಮುಂದಾಗಿದ್ದಾರೆ. ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಹಾನಿಯುಂಟಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಗಿಲ್ಕಿಯ ‘ತೀರ ಸೇರೋ’ ಹಾಡು ರಿಲೀಸ್ ಮಾಡಿದ ರಾಜ್ ಬಿ ಶೆಟ್ಟಿ..!
ಇನ್ನೂ ಜನರ ಕಷ್ಟಕ್ಕೆ ಟಾಲಿವುಡ್ ನಟ ಜೂನಿಯರ್ ಎನ್ಟಿಆರ್ ಮತ್ತು ಸೂಪರ್ ಸ್ಟಾರ್ ಮಹೇಶ್ ಬಾಬು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಲು ಆಂಧ್ರಪ್ರದೇಶ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಬುಧವಾರ ಘೋಷಿಸಿದ್ದರು.
ಇದರ ಬೆನ್ನಲ್ಲೇ ನಟ ಚಿರಂಜೀವಿ ಮತ್ತು ಅವರ ಪುತ್ರ ರಾಮ್ ಚರಣ್ ತೇಜ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ. ನೀಡುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ‘ಆಂಧ್ರಪ್ರದೇಶದಲ್ಲಿ ಪ್ರವಾಹ ಮತ್ತು ಧಾರಾಕಾರ ಮಳೆಯಿಂದಾಗಿ ವ್ಯಾಪಕವಾಗಿ ಹಾನಿಯುಂಟಾಗಿರುವ ವಿಚಾರ ಬಹಳ ನೋವುಂಟು ಮಾಡಿದೆ. ಪ್ರವಾಹದಿಂದ ಉಂಟಾದ ವ್ಯಾಪಕ ವಿನಾಶ ಮತ್ತು ಹಾನಿಯಿಂದ ನನಗೆ ನೋವಾಗಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ.25 ಲಕ್ಷ ರೂ. ಕೊಡುಗೆ ನೀಡುತ್ತಿದ್ದೇನೆ’ ಎಂದು ಚಿರಂಜೀವಿ ಟ್ವೀಟ್ ಮಾಡಿದ್ದಾರೆ.
ಹಾಗೆಯೇ ರಾಮ್ಚರಣ್ ತೇಜ ಅವರು ಕೂಡ ಟ್ವೀಟ್ ಮಾಡಿ ‘ಭಯಾನಕ ಪ್ರವಾಹದಿಂದಾಗಿ ಆಂಧ್ರಪ್ರದೇಶದ ಜನತೆ ಅನುಭವಿಸುತ್ತಿರುವ ಕಷ್ಟವನ್ನು ನೋಡಲು ಹೃದಯ ಭಾರವೆನಿಸುತ್ತಿದೆ. ಜನರಿಗೆ ಸಹಾಯ ಮಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿಯ ನನ್ನದೊಂದು ಪುಟ್ಟ ಕಾಣಿಕೆ ನೀಡುತ್ತಿದ್ದೇನೆ ‘ಎಂದು ತಿಳಿಸಿದ್ದಾರೆ..