ಮೆಗಾಸ್ಟಾರ್ ಚಿರಂಜೀವಿ ಸಹೋದರನಿಗೆ ಕೊರೊನಾ ಪಾಸಿಟಿವ್

ಸ್ಟಾರ್ ಗಳಲ್ಲಿ ಒಬ್ಬರಾದ ಬಳಿಕ ಒಬ್ಬರಿಗೆ ಕೊರೊನಾ ಪಾಸಿಟಿವ್ ಬರುತ್ತಿದೆ. ಇದೀಗ ಆ ಸಾಲಿಗ ತೆಲುಗಿನ ಖ್ಯಾತ ನಟರು ಹಾಗೂ ಚಿರಂಜೀವಿ ಸಹೋದರ ಸೇರಿಕೊಂಡಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರ ನಾಗಬಾಬುಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

ಈ ಕುರಿತು ನಾಗಬಾಬು ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ ತಾವು ಸಂಪೂರ್ಣವಾಗಿ ಗುಣಮುಖರಾದ ಬಳಿಕ ಪ್ಲಾಸ್ಮಾ ದಾನ ಮಾಡುವುದಾಗಿಯೂ ನಾಗಬಾಬು ಅವರು ತಿಳಿಸಿದ್ದಾರೆ. ಇನ್ನೂ ಚಿರಂಜೀವಿ ಅವರ ಅಳಿಯ ಕಲ್ಯಾಣ್ ದೇವ್ ಸಹ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ”ಬೇಗ ಗುಣಮುಖರಾಗಿ ನಾಗಬಾಬಯ್” ಎಂದಿದ್ದಾರೆ.

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This