ಬೆಂಗಳೂರು, ಜೂನ್ 8: ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆಯನ್ನು ಅವರ ಸಹೋದರ ಧ್ರುವ ಸರ್ಜಾ ಅವರ ಫಾರ್ಮ್ ಹೌಸ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಮೊದಲು ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಬಳಿಕ ಕನಕಪುರ ರಸ್ತೆ ಬಳಿಯಿರುವ ನೆಲಗೂಳಿ ಗ್ರಾಮದಲ್ಲಿರುವ ಧ್ರುವ ಸರ್ಜಾ ಅವರ ಫಾರ್ಮ್ ಹೌಸ್ ನಲ್ಲಿ ನಡೆಸಲು ಚಿರಂಜೀವಿ ಸರ್ಜಾ ಅವರ ಕುಟುಂಬ ವರ್ಗ ನಿರ್ಧರಿಸಿದೆ
ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿರು ಭಾನುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದರು. ಅವರ ಮೃತದೇಹವನ್ನು ಬಸವನಗುಡಿಯ ನಿವಾಸದಲ್ಲಿ ಇಡಲಾಗಿದ್ದು, ಮಧ್ಯಾಹ್ನದವರೆಗೆ ಮನೆಯಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ 1 ಗಂಟೆಗೆ ಧ್ರುವ ಸರ್ಜಾ ರ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸರ್ಜಾ ಅವರ ಕುಟುಂಬ ವರ್ಗ ತಿಳಿಸಿದೆ.
ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ
ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...








